ಜಿಲ್ಲಾಡಳಿತ ಆದೇಶಕ್ಕೆ ಕಿಮ್ಮತ್ತಿಲ್ಲ; ಮಾಸ್ಕ್, ಸಾಮಾಜಿಕ ಅಂತರವಿಲ್ಲದೇ ಓಡಾಟ - yadgiri people roaming without mask
ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ದೇಶಾದ್ಯಂತ ಕೇಂದ್ರ ಸರ್ಕಾರ ಮೇ 17 ರ ವರೆಗೆ 3 ನೇ ಹಂತದ ಲಾಕ್ಡೌನ್ ಮುಂದುವರೆಸಿದೆ. ಗ್ರೀನ್ ಝೋನ್ ಆದ ಯಾದಗಿರಿ ಜಿಲ್ಲೆಯಲ್ಲಿ ಕೂಡ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಬಹುತೇಕ ಎಲ್ಲಾ ವ್ಯಾಪಾರ ವಹಿವಾಟುಗಳು ಪ್ರಾರಂಭಗೊಂಡಿದೆ. ಆದ್ರೆ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಹಾಗೂ ಮಾಸ್ಕ್ ಧರಿಸದೆ ರಸ್ತೆಯಲ್ಲಿ ಸಂಚರಿಸುತ್ತಿರುವುದರಿಂದ ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಜನ ಜಿಲ್ಲಾಡಳಿತದ ಆದೇಶ ಗಾಳಿಗೆ ತೂರಿ ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಉಲ್ಲಂಘಿಸುವ ಮೂಲಕ ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.