ನೆರೆಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ.. 26 ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ
ಸಿಎಂ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ವರದಾ ನದಿ ತೀರದ 26 ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದರು. ಶೀಘ್ರವೇ ಭೂಮಿ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಮನೆಗಳನ್ನ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ, ಸಂತ್ರಸ್ತರಿಗೆ ಒಳ್ಳೆಯ ಮನೆ ಕಟ್ಟಿಕೊಡುವ ಭರವಸೆ ನೀಡಿದರು.