ಪ್ರವಾಹದಿಂದಾಗಿ ರಾಜ್ಯದ ಹಣಕಾಸು ಸ್ಥಿತಿ ಹದಗೆಟ್ಟಿದೆ... ಎಲ್ಲ ಸರಿಯಾಗುತ್ತೆ ಎಂದ ಬಿಎಸ್ವೈ - ಕರ್ನಾಟಕ
ರಾಜ್ಯದಲ್ಲಿನ ಹಣಕಾಸಿನ ಪರಿಸ್ಥಿತಿ ನಿಮಗೆಲ್ಲ ಗೊತ್ತಿದೆ. ಅನಿವಾರ್ಯ ಕಾರಣಗಳಿಂದ ಹಣಕಾಸಿನ ಪರಿಸ್ಥಿತಿಯಲ್ಲಿ ಸ್ವಲ್ಪ ಸಮಸ್ಯೆಯಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಎಫ್‌ಕೆಸಿಸಿಐ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಭಾರಿ ಹಾನಿಯಾಗಿದ್ದು, ಲಕ್ಷಾಂತರ ಮಂದಿ ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅಂತವರಿಗೆ ಮನೆ ಕಲ್ಪಿಸಲು ಸರ್ಕಾರ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದ್ದಾರೆ....