ಯಶವಂತಪುರ ಬಿಜೆಪಿ ಅಭ್ಯರ್ಥಿ ಸೋಮಶೇಖರ್ ಮುನ್ನಡೆ... ಬೆಂಬಲಿಗರಿಂದ ಸಂಭ್ರಮಾಚರಣೆ
ಬೆಂಗಳೂರು: ಯಶವಂತಪುರ ಉಪ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಭರ್ಜರಿ ಮುನ್ನಡೆ ಸಾಧಿಸುತ್ತಿದ್ದ ಹಾಗೆ ಕಮಲ ಪಡೆ ಸಂಭ್ರಮಾಚರಿಸಿತು. ಆರ್.ವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಕಾರ್ಯಕರ್ತರು, ಬಿಜೆಪಿ ಹಾಗೂ ಎಸ್.ಟಿ.ಸೋಮಶೇಖರ್ ಪರ ಘೋಷಣೆ ಕೂಗಿದರು. 10,000 ಮತ ಮುನ್ನಡೆ ಸಾಧಿಸಿತ್ತಿದ್ದ ಹಾಗೆ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.