ಸಿಎಂ ಬದಲಾವಣೆ ಕುರಿತ ಯತ್ನಾಳ್ ಹೇಳಿಕೆ ಬಗ್ಗೆ ಸಿ ಟಿ ರವಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತು.. - ಸಿಎಂ ಬಗ್ಗೆ ಯತ್ನಾಳ್ ಹೊಸ ಬಾಂಬ್
ಚಿಕ್ಕಮಗಳೂರು : ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಬದಲಾವಣೆ ಮಾಡ್ತಾರೆ ಅನ್ನೋ ಬಿಜೆಪಿ ಶಾಸಕ ಬಸನಗೌಡನ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾನು ಅವರ ಬಗ್ಗೆ ಏನನ್ನೂ ಹೇಳಲು ಬಯಸಲ್ಲ. ಪಕ್ಷದ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಇದೇ ತಿಂಗಳ 18ರಂದು ಬಹುತೇಕ ಕೋರ್ ಕಮಿಟಿ ಸಭೆ ಇದೆ. ಸಭೆಯಲ್ಲಿ ಹಲವು ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಗುತ್ತದೆ. ಈ ಬಗ್ಗೆ ಸಿಎಂ, ರಾಜ್ಯ ಉಸ್ತುವಾರಿ, ರಾಜ್ಯಾಧ್ಯಕ್ಷರು ನಿರ್ಣಯ ಕೈಗೊಳ್ಳುತ್ತಾರೆ. ರಾಜ್ಯದ ಕೆಲ ವಿದ್ಯಮಾನಗಳು ಕಾರ್ಯಕರ್ತರಲ್ಲಿ ಬೇಸರ ತರಿಸಿವೆ ಎಂದರು.