ಯೋಗೀಶಗೌಡ ಕೊಲೆ ಪ್ರಕರಣ: ವಿಚಾರಣೆ ಮುಗಿಸಿ ಹೊರಬಂದ ಕಾಂಗ್ರೆಸ್ ಮುಖಂಡ - ಸಿಬಿಐ
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಚುರಕುಗೊಳಿಸಿದ್ದು, ಇಂದು ಕಾಂಗ್ರೆಸ್ ಮುಖಂಡ ನಾಗರಾಜ ಗೌರಿಯನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಾಗರಾಜ ಗೌರಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವಿಚಾರವಾಗಿ ಮಲ್ಲಮ್ಮನನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ರಯತ್ನ ಮಾಡಿದ್ದೆವು. ಈ ಬಗ್ಗೆ ಸಿಬಿಐ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಸಿಬಿಐ ಅಧಿಕಾರಿಗಳ ತನಿಖೆಗೆ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದೇವೆ ಎಂದರು.