ಎಸ್‌ಎಸ್‌ಎಲ್‌ಸಿ ಜೊತೆಗೆ ಕೊರೊನಾ ಪರೀಕ್ಷೆಯನ್ನೂ ಗೆಲ್ಲಬೇಕಿದೆ: ಸಚಿವ ಸುರೇಶ್ ಕುಮಾರ್ - ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ
ಎಲ್ಲವೂ ಅಂದುಕೊಂಡಂತೆ ಆಗಿದ್ದಿದ್ದರೆ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರಾಜ್ಯಾದ್ಯಂತ ಆರಂಭವಾಗಬೇಕಿತ್ತು. ಆದರೆ ಕೊರೊನಾ ವೈರಸ್ ಹರಡುವಿಕೆಯಿಂದಾಗಿ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.