ನಿರುದ್ಯೋಗದಿಂದಾಗಿ ಯುವಜನತೆ ಕೋಮುವಾದಕ್ಕೆ ಬಲಿಯಾಗಿದ್ದಾರೆ.. ಬಿ ಕೆ ಇಮ್ತಿಯಾಜ್ - ಬಿ ಕೆ ಇಮ್ತಿಯಾಜ್
ದಕ್ಷಿಣ ಕನ್ನಡ ಜಿಲ್ಲೆಯ ಜನರು ನಿರುದ್ಯೋಗ ಸಮಸ್ಯೆಯಿಂದ ಸಂಕಷ್ಟಕ್ಕೊಳಗಾಗಿದ್ದು, ಉದ್ಯೋಗವಿಲ್ಲದ ಪರಿಣಾಮ ಇವರೆಲ್ಲ ಕೋಮುವಾದಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್ ಆತಂಕ ವ್ಯಕ್ತಪಡಿಸಿದರು. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಖಾಲಿಯಿರುವ ಹುದ್ದೆಯನ್ನು ಸ್ಥಳೀಯ ಯುವಕರಿಗೆ ನೀಡಬೇಕು ಎಂದು ಆಗ್ರಹಿಸಿ ನಡೆದ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಜಿಲ್ಲೆಯಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದ್ದರೂ ಖಾಲಿ ಹುದ್ದೆ ಭರ್ತಿ ಮಾಡುತ್ತಿಲ್ಲ. ಜಿಲ್ಲೆಗೆ ಬಂದ ಕೈಗಾರಿಕೆಗಳು ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡಿಲ್ಲ ಎಂದು ಆರೋಪಿಸಿದರು.
Last Updated : Sep 9, 2019, 3:17 PM IST