ಶಿರಾ ಉಪಚುನಾವಣೆ: ಯೂತ್ ಕಾಂಗ್ರೆಸ್ನಿಂದ ಬೃಹತ್ ಬೈಕ್ ರ‍್ಯಾಲಿ - ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ
ತುಮಕೂರು: ಶಿರಾ ವಿಧಾನಸಭಾ ಉಪಚುನಾವಣಾ ಕಣ ರಂಗೇರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಪರವಾಗಿ ಮತಯಾಚಿಸಲು ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು. ಶಿರಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸಿದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ರ‍್ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಲಪಾಡ್, ರಾಜೇಂದ್ರ ಮತ್ತಿತರರು ಭಾಗವಹಿಸಿದ್ದರು.