ಚಿಕ್ಕೋಡಿ: ಶಾರ್ಟ್ ಸರ್ಕ್ಯೂಟ್ನಿಂದ 10 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ - 10 acres of sugar cane crop
ಚಿಕ್ಕೋಡಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟಾವಿಗೆ ಬಂದಿದ್ದ ಸುಮಾರು 10 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ನಡೆದಿದೆ. ಶಾಂತಿನಾಥ ಪಾಟೀಲ್, ಮಲಗೌಡ ಪಾಟೀಲ್, ರಾಮಗೌಡ ಪಾಟೀಲ್ ಹಾಗೂ ಚೇತನ ಪಾಟೀಲ್ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ಇದಾಗಿದ್ದು, ಸ್ಥಳೀಯರು ಬೆಂಕಿ ನಂದಿಸುವಷ್ಟರಲ್ಲಿ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ.