ಬಸ್‌ಗೆ ಟ್ರಕ್ ಡಿಕ್ಕಿ.. 5 ಸಾವು, 17 ಮಂದಿಗೆ ಗಾಯ - ಉಪ ವಿಭಾಗೀಯ ಪೊಲೀಸ್ ಅಧಿಕಾರಿ
ಒಡಿಶಾದ ಜಾರ್ಸುಗುಡ-ಸಂಬಲ್‌ಪುರ್ ಬಿಜು ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಪ್ಲಾಂಟ್‌ನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಹೈವಾ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಕಾರಣವೇನು ಎಂಬುದನ್ನು ತನಿಖೆ ಮಾಡಲಾಗುತ್ತಿದೆ ಎಂದು ಜಾರ್ಸುಗುಡ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ತಿಳಿಸಿದ್ದಾರೆ.