ಅಸ್ಸಾಂನಲ್ಲಿ ಭೀಕರ ಪ್ರವಾಹ: ಈವರೆಗೆ 25 ಸಾವು, 31 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ - ಅಸ್ಸಾಂನ ಚಿರಾಂಗ್ ಜಿಲ್ಲೆಯಲ್ಲಿ ಭೀಕರ ಪ್ರವಾಹ
ಅಸ್ಸಾಂ: ಭೀಕರ ಪ್ರವಾಹಕ್ಕೆ ಈಶಾನ್ಯ ರಾಜ್ಯ ಅಸ್ಸಾಂ ತತ್ತರಿಸಿದೆ. ವರುಣನ ಅಬ್ಬರಕ್ಕೆ ಈಗಾಗಲೇ 25 ಜನರು ಪ್ರಾಣ ಕಳೆದುಕೊಂಡಿದ್ದಾರೆ. 31ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸಿಎಂ ಜೊತೆ ಮಾತನಾಡಿ ಎಲ್ಲಾ ರೀತಿಯ ನೆರವು ನೀಡುವ ಭರವಸೆ ಕೊಟ್ಟಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.
Last Updated : Jun 19, 2022, 9:23 AM IST