ತುಮಕೂರಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೊಚ್ಚಿ ಹೋದ ಆಟೋ ಚಾಲಕ! - ನೀರಿನಲ್ಲಿ ಕೊಚ್ಚಿಹೋದ ಯುವಕ
ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆಟೋ ಚಾಲಕ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ನಗರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹರಿಯುತ್ತಿದ್ದ ನೀರಿನ ಬಳಿ ಸೆಲ್ಫಿ ತೆಗೆಯಲು ಹೋಗಿ ಅಮ್ಜದ್ ಎಂಬ ಆಟೋ ಚಾಲಕ ನೀರುಪಾಲಾಗಿದ್ದಾನೆ. ಸೆಲ್ಫಿ ತೆಗೆಯುತ್ತಿದ್ದಾಗ ಆಯತಪ್ಪಿ ನೀರಿನಲ್ಲಿ ಬಿದ್ದಿದ್ದು, ಪೊಲೀಸ್ ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.