ರಾತ್ರಿ ಗ್ರಾಮಕ್ಕೆ ನುಗ್ಗಿದ ಜಾಂಬವ.. ಕರಡಿ ಕಂಡು ಬೆಚ್ಚಿಬಿದ್ದ ಜನ - ಗ್ರಾಮಕ್ಕೆ ನುಗ್ಗಿದ ಜಾಂಬವ
ಬಳ್ಳಾರಿ: ತಾಲೂಕಿನ ಹಲಕುಂದಿ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದ ಮಧ್ಯ ಭಾಗದಲ್ಲಿರುವ ಆಶ್ರಯ ಕಾಲೋನಿಯಲ್ಲಿ ಕರಡಿಯೊಂದು ಓಡಾಟ ನಡೆಸಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಯಿಗಳ ಕೂಗಾಟದಿಂದ ಹೊರಬಂದ ಜನರು ಕರಡಿ ಕಂಡ ತಕ್ಷಣ ಮನೆಯ ಬಾಗಿಲು ಹಾಕಿಕೊಂಡಿದ್ದು, ಕರಡಿ ಅಲ್ಲಿಂದ ಪರಾರಿಯಾಗಿದೆ. ಮಾಹಿತಿ ತಿಳಿದು ಎಚ್ಚೆತ್ತ ಬಳ್ಳಾರಿ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಮದ ಸುತ್ತಮುತ್ತ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಅಲ್ಲದೇ ಕರಡಿ ಕಂಡಲ್ಲಿ ತಕ್ಷಣ ಅರಣ್ಯ ಇಲಾಖೆಗೆ ತಿಳಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.