ಪುತ್ತೂರಿನಿಂದ ಬೆಳ್ಳಾರೆಗೆ ಪ್ರವೀಣ್ ನೆಟ್ಟಾರು ಶವಯಾತ್ರೆ; ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗಿ - ದ ಬಿಜೆಪಿ ಯುವನಾಯಕ ಕೊಲೆ
ಪುತ್ತೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾದ ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಬೆಳಗ್ಗೆ 10 ಗಂಟೆಯ ಸುಮಾರಿಗೆ ಪ್ರಾರಂಭವಾಗಿದೆ. ಪುಷ್ಪಾಲಂಕೃತ ಆಂಬುಲೆನ್ಸ್‌ನಲ್ಲಿ ಮೃತದೇಹ ಸಾಗುತ್ತಿದೆ. ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಸಾಗಿದ್ದಾರೆ. ದರ್ಬೆ ವೃತ್ತದ ಬಳಿ ಸಾವಿರಾರು ಜನರು ಅಂತಿಮ ದರ್ಶನ ಪಡೆದರು. ಬಳಿಕ ಸವಣೂರು-ಪೆರುವಾಜೆ ಮಾರ್ಗವಾಗಿ ಬೆಳ್ಳಾರೆಗೆ ಬೀಳ್ಕೊಡಲಾಯಿತು.