ಸಚಿವರ ಪ್ರಮಾಣಕ್ಕೂ ಮುನ್ನ ಬಾಲಾಂಜನೇಯ ದೇವಸ್ಥಾನದಲ್ಲಿ ಬಿಎಸ್ವೈ ವಿಶೇಷ ಪೂಜೆ - ಡಾಲರ್ಸ್ ಕಾಲೋನಿ
ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಬಾಲಾಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸ ಧವಳಗಿರಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗೂ ಆಯ್ಕೆಯಾದವರ ಭೇಟಿ ನಂತರ ಮನೆಯಿಂದ ನಿರ್ಗಮಿಸಿದ ಸಿಎಂ, ಮನೆಯ ಸಮೀಪದಲ್ಲಿರುವ ಬಾಲಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದು ಪೂಜೆ ಸಲ್ಲಿಸಿ ನಂತರ ವಿಧಾನಸೌಧಕ್ಕೆ ತೆರಳಿದರು.