ಮಂಗಳೂರು: ಪಾರ್ಕಿಂಗ್ ಮಾಡಿದ್ದ ಕಾರು, ಜೀಪ್ ಬೆಂಕಿಗಾಹುತಿ - ಈಟಿವಿ ಭಾರತ್ ಕನ್ನಡ
ಮಂಗಳೂರು: ನಗರದ ಜೆಪ್ಪು ಕುಡ್ಪಾಡಿ ಎಂಬಲ್ಲಿ ರೈಲ್ವೆ ಅಂಡರ್ ಪಾಸ್ನಲ್ಲಿ ಪಾರ್ಕಿಂಗ್ ಮಾಡಿದ್ದ ಎರಡು ವಾಹನಗಳು ಬೆಂಕಿಗಾಹುತಿಯಾಗಿವೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ರಾಜೇಶ್ ಎಂಬವರಿಗೆ ಸೇರಿದ ಒಂದು ಇನ್ನೋವಾ ಕಾರು ಹಾಗೂ ಮಹೇಂದ್ರ ಜೀಪ್ಗೆ ಬೆಂಕಿ ತಗುಲಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಎರಡು ವಾಹನಗಳನ್ನು ಒಟ್ಟಿಗೆ ಪಾರ್ಕ್ ಮಾಡಲಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.