ಕೆರೆ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ಕಾರು: ಚಾಲಕ ಪಾರು
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ದಾಸನಕುಂಟೆ ಗ್ರಾಮದ ಕೆರೆ ಕೋಡಿ ನೀರಿನಲ್ಲಿ ಕಾರೊಂದು ಕೊಚ್ಚಿ ಹೋದ ಘಟನೆ ನಡೆದಿದೆ. ಕೆರೆ ಸಮೀಪದ ರಸ್ತೆಯಲ್ಲಿ ಹಾದು ಹೋಗಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ನೀರಿಗೆ ಬಿದ್ದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ನೀರು ರಭಸವಾಗಿ ಹರಿಯುತ್ತಿರುವುದರಿಂದ ಕಾರು ಹೊರ ತೆಗೆಯಲು ಸಾಧ್ಯವಾಗಿಲ್ಲ.