ಸ್ಕೂಟಿ ಮೇಲೆ ಹರಿದ ಲಾರಿ: ಇಬ್ಬರು ಮಹಿಳೆಯರು ಪ್ರಾಣಾಪಾಯದಿಂದ ಪಾರು- ವಿಡಿಯೋ - A lorry collided with a bike
ವೆಲ್ಲೂರು ಗುಡಿಯಾಟಂನ ಮೆಲ್ಲ ಅಲಂದೂರು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದಿದ್ದು, ಅದೃಷ್ಟವಶಾತ್ ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಗುಡಿಯಾಟಂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಲಾರಿ ಅಡಿಯಲ್ಲಿ ಸಿಲುಕಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ.