ರಾಯಚೂರು ಕಾಂಗ್ರೆಸ್ ಕಚೇರಿಯಲ್ಲಿ ಕೈ ಮುಖಂಡರ ಮಾತಿನ ಚಕಮಕಿ: ವಿಡಿಯೋ ವೈರಲ್ - Clash between Congress leaders video viral
ರಾಯಚೂರು: ನಗರದ ಗಂಜ್ ವೃತ್ತದ ಬಳಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಯುತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಎ.ವಸಂತ ಕುಮಾರ್ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಕೈ ಕೈ ಮೀಲಾಯಿಸುವ ಹಂತಕ್ಕೆ ತಲುಪಿತ್ತು. ಆಗ ಸಭೆಯಲ್ಲಿ ಇದ್ದ ಮುಖಂಡರು ಸಮಾಧಾನಪಡಿಸಿ ವಾತಾವರಣವನ್ನು ತಿಳಿಗೊಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಮುಖಂಡರ ಅಸಮಾಧಾನ ಬಹಿರಂಗಗೊಂಡಿದೆ.