ಉಮೇಶ್ ಕತ್ತಿ ಅವರೊಂದಿಗಿನ ಒಡನಾಟ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ - ಈಟಿವಿ ಭಾರತ್ ಕನ್ನಡ
ಬೆಂಗಳೂರು: ಹಿರಿಯ ನಾಯಕ ಉಮೇಶ್ ಕತ್ತಿ ಅಗಲಿಕೆಯಿಂದ ವೈಯಕ್ತಿಕವಾಗಿ ನನಗೆ ತುಂಬಲಾರದ ನಷ್ಟವಾಗಿದೆ. ರಾಜಕೀಯ ರಂಗ ಮಾತ್ರವಲ್ಲದೆ ಸಹಕಾರಿ ರಂಗದಲ್ಲಿಯೂ ಕೆಲಸ ಮಾಡಿದ್ದರು, ಹಲವಾರು ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದಾರೆ. ಸ್ವ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ಕನಸು ಕಂಡಿದ್ದರು. ಕಳೆದ ಸಚಿವ ಸಂಪುಟ ಸಭೆಯಲ್ಲಿಯೂ ಅದಕ್ಕೆಲ್ಲ ಒಪ್ಪಿಗೆ ಕೊಟ್ಟಿದ್ದೆ. ಅದರಿಂದ ಅವರು ಖುಷಿಯಾಗಿದ್ದರು. ಒಬ್ಬ ಮುತ್ಸದ್ಧಿ ರಾಜಕಾರಣಿ, ಹಿರಿಯ ನಾಯಕನನ್ನು ಕಳೆದುಕೊಂಡಿದ್ದೇವೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾರ್ಥಿಸಿದರು.