ಮಂತ್ರಾಲಯ ಮಠಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ವೈ ಭೇಟಿ - ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ
ರಾಯಚೂರು ಜಿಲ್ಲೆಯ ಗಿಲ್ಲೆಸೂಗೂರು ಗ್ರಾಮದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಶ್ರೀಮಠಕ್ಕೆ ಭೇಟಿ ನೀಡಿದರು. ಆರಂಭದಲ್ಲಿ ಗ್ರಾಮದ ದೇವತೆ ಮಂಚಾಲ್ಲಮ್ಮ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀರಾಘವೇಂದ್ರ ಸ್ವಾಮಿಗಳ ಬೃಂದಾವನ ದರ್ಶನ ಪಡೆದು ಪೂಜೆ ನೆರವೇರಿಸಿದರು. ಇದಾದ ಬಳಿಕ ಶ್ರೀಮಠದ ಪೀಠಾಧಿಪತಿ ಶ್ರೀಸುಭುದೇಂದ್ರ ತೀರ್ಥರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿ, ಶ್ರೀಮಠದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಚರ್ಚಿಸಿದರು. ನಂತರ ಶ್ರೀಮಠದಿಂದ ಸನ್ಮಾನಿಸಿ ಆರ್ಶೀವಾದಿಸಿದರು. ಇದೇ ವೇಳೆ, ಮಂತ್ರಾಲಯ ಹಾಗೂ ಸುತ್ತಮುತ್ತಲಿನ ಗ್ರಾಮಗಳು ಕುಡಿಯುವ ನೀರಿನ ಪೂರೈಕೆ ಹಾಗೂ ಸ್ನಾನ ಘಟ್ಟದ ನಿರ್ಮಾಣದ ಯೋಜನೆಯ ಕಾಮಗಾರಿಯನ್ನು ಡಿಜಿಟಲ್ ತಂತ್ರಜ್ಞಾನದ ಮೂಲಕ ಅನಾವರಣಗೊಳಿಸಿದರು.