ವಿಕಲಚೇತನ ಯುವಕನ ಬೇಡಿಕೆಗೆ ಸ್ಪಂದಿಸಿದ ಸಿಎಂ ಬೊಮ್ಮಾಯಿ - ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಬೆಂಗಳೂರು: ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಅಡವಿಬಾವಿ ಗ್ರಾಮದ ಶಿವಪ್ಪ ಎಂಬ ವಿಕಲಚೇತನ ಯುವಕನ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಸ್ಪಂದಿಸಿದರು. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಹೊರಗೆ ಬಂದ ಸಿಎಂ ಅವರನ್ನು ಭೇಟಿ ಮಾಡಿದ ಶಿವಪ್ಪ ತನ್ನ ತ್ರಿಚಕ್ರ ವಾಹನ ಅಪಘಾತಕ್ಕೆ ಈಡಾಗಿದ್ದು, ಹೊಸ ತ್ರಿಚಕ್ರ ವಾಹನ ಕಲ್ಪಿಸಲು ಮನವಿ ಮಾಡಿದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಸಿಎಂ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ತ್ರಿಚಕ್ರ ವಾಹನದ ವ್ಯವಸ್ಥೆ ಮಾಡುವಂತೆ ಸೂಚಿಸಿದರು.