ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರಿಗೆ ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ - ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು
ದೆಹಲಿ ಹಿಂಸಾಚಾರದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೊರಿ ಸಿಪಿಐಎಂ ನೇತೃತ್ವದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಗರದ ಜಗತ್ ವೃತ್ತದಲ್ಲಿ ಮೇಣದ ಬತ್ತಿ ಬೆಳಗಿಸಿದ ಕಾರ್ಯಕರ್ತರು, ದೆಹಲಿಯ ಹಿಂಸಾಚಾರ ಕೇಂದ್ರ ಸರ್ಕಾರದ ಪ್ರಾಯೋಜಿತವಾಗಿದೆ ಎಂದು ಆರೋಪಿಸಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಹಾಗೂ ಹಿಂಸಾಚಾರ ತಡೆಯುವಂತೆ ಆಗ್ರಹಿಸಿದರು.