ಅಕ್ರಮ ಸಂಬಂಧ ಶಂಕೆ.. ಯುವಕನ ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ - ಈಟಿವಿ ಭಾರತ ಕರ್ನಾಟಕ
ಸಂತಕಬೀರ್ ನಗರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಂತಕಬೀರ್ ನಗರ ಜಿಲ್ಲೆಯ ದುಧಾರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆವೊಂದು ನಡೆದಿದೆ. ಪಿಪ್ರಾ ಹಸನ್ಪುರ್ ಗ್ರಾಮದ ಯುವಕನೋರ್ವ ಅದೇ ಗ್ರಾಮದ ಯುವತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿರುವ ಕೆಲವರು, ಆತನ ತಲೆ ಬೋಳಿಸಿ, ಹಲ್ಲೆ ನಡೆಸಿದ್ದಾರೆ. ಇದರ ಜೊತೆಗೆ ಚಪ್ಪಲಿ, ಶೂ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಇದರ ವಿಡಿಯೋ ಸೆರೆ ಹಿಡಿದಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಆಧಾರದ ಮೇಲೆ ಎಚ್ಚೆತ್ತುಕೊಂಡಿರುವ ಪೊಲೀಸರು ಏಳು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.