ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ - Car collided to the bike
ತುಮಕೂರು: ಅತಿ ವೇಗವಾಗಿ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ತುಮಕೂರು ಹೊರವಲಯದ ಶೆಟ್ಟಿಹಳ್ಳಿ ಸಿಗ್ನಲ್‌ನಲ್ಲಿನ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಬೈಕ್ ಸವಾರರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ತುಮಕೂರು ಪಶ್ಚಿಮ ವಲಯದ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.