ಎಸಿಬಿ ದಾಳಿ: ಆಪ್ ಶಾಸಕ ಅಮಾನತುಲ್ಲಾ ಖಾನ್ ಬೆಂಬಲಿಗರಿಂದ ಅಧಿಕಾರಿ ಮೇಲೆ ದೌರ್ಜನ್ಯ - ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು
ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ ಎರಡೇ ದಿನಗಳಲ್ಲಿ, ಎಸಿಬಿ ಬಿಡುಗಡೆ ಮಾಡಿರುವ ವಿಡಿಯೋ ಎಎಪಿ ನಾಯಕನಿಗೆ ಇನ್ನಷ್ಟು ಸಂಕಷ್ಟ ತಂದೊಡ್ಡಿದೆ. ಶಾಸಕನ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಸಮವಸ್ತ್ರ ಧರಿಸಿದ್ದ ಅಧಿಕಾರಿಯನ್ನು ಅಮಾನತುಲ್ಲಾ ಖಾನ್ ಬೆಂಬಲಿಗರು ಎನ್ನಲಾದ ಕೆಲವರು ಎಸಿಬಿ ಅಧಿಕಾರಿಯನ್ನು ತಳ್ಳಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅಮಾನತುಲ್ಲಾ ಖಾನ್ ಅವರನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.