ಮೀಸಲು ಸಂಬಂಧ ಸುಪ್ರೀಂ ತೀರ್ಪು ವಿಚಾರ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - ಅನ್ನಪೂರ್ಣ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮೀಸಲು ಸಂವಿಧಾನದ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಅಂಶ ಹಾಗೂ ಕೇಂದ್ರ ಸರ್ಕಾರ ಮೀಸಲನ್ನೇ ರದ್ದುಗೊಳಿಸಲು ಮುಂದಾಗಿದೆ ಎಂದು ಆರೋಪಿಸಿ ಕಲಬುರಗಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಕಚೇರಿಯಿಂದ ಅನ್ನಪೂರ್ಣ ಕ್ರಾಸ್ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿ, ಮೋದಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.
Last Updated : Feb 15, 2020, 3:20 PM IST