ಕರ್ನಾಟಕ

karnataka

ETV Bharat / videos

ಕುಡಿಯುವ ನೀರು ಪೂರೈಸುವ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು - ಅಪಾರ ಪ್ರಮಾಣದ ನೀರು ಪೋಲು

By

Published : May 11, 2022, 1:07 PM IST

ಕೊಪ್ಪಳ : ನಗರಕ್ಕೆ ಕುಡಿಯುವ ನೀರು ಪೂರೈಸುವ ಪೈಪ್ ಒಡೆದು ನೀರು ಪೋಲಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಭೇಟಿ ನೀಡಿಲ್ಲ. ತಾಲೂಕಿನ ಕಾಸನಕಂಡಿ ಗ್ರಾಮದ ಹೊರ ವಲಯದಲ್ಲಿ ನಗರಕ್ಕೆ ಸರಬರಾಜು ಮಾಡುವ ಕುಡಿಯುವ ನೀರಿನ ಪೈಪ್ ಲೈನ್ ಇದಾಗಿದೆ. ನಿನ್ನೆ ಮಧ್ಯಾಹ್ನದಿಂದಲೇ ಈ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. ಈ ಕುರಿತು ಸ್ಥಳಿಯರು ಮಾಹಿತಿ ನೀಡಿದರೂ ಕೂಡ ಯಾರೋಬ್ಬರು ಇತ್ತ ಕಡೆ ತಲೆ ಹಾಕಿಲ್ಲ. ಮೊದಲೇ ಬೇಸಿಗೆ ಕಾರಣ ಹೇಳಿ ವಾರಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪೈಪ್​​ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದಕ್ಕೆ ಹಿಡಿಶಾಪ ಹಾಕಲಾಗುತ್ತಿದೆ. ಸುತ್ತಮುತ್ತಲ ಜಮೀನಿಗೆ ನೀರು ನುಗ್ಗಿ ಕೃಷಿ ಚಟುವಟಿಕೆಗೆ ತೊಂದರೆಯುಂಟಾಗಿದೆ.

ABOUT THE AUTHOR

...view details