ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ.. ಡ್ರೋನ್ ಕಣ್ಗಾವಲು - ಈಟಿವಿ ಭಾರತ್ ಕರ್ನಾಟಕ
ಹುಬ್ಬಳ್ಳಿ : ಇಲ್ಲಿನ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಭಾರಿ ಭದ್ರತೆ ಕೈಗೊಂಡಿದ್ದಾರೆ. ಈದ್ಗಾ ಮೈದಾನದ ಸುತ್ತ ಶ್ವಾನ ದಳ ಹಾಗೂ ಬಾಂಬ್ ಪತ್ತೆ ದಳದಿಂದ ಪರಿಶೀಲನೆ ನಡೆಸಲಾಯಿತು. ಯಾವುದೇ ಅಹಿತಕರ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು ಡ್ರೋನ್ ಕಣ್ಗಾವಲಿನಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.