ಕರ್ನಾಟಕ

karnataka

By

Published : Sep 23, 2022, 7:52 PM IST

ETV Bharat / videos

ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ತಿಂದ ಕಾಡಾನೆ: ವಿಡಿಯೋ ವೈರಲ್

ಚಾಮರಾಜನಗರ: ಹೆದ್ದಾರಿ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್​ ಅನ್ನು ಕಾಡಾನೆಯೊಂದು ತಿನ್ನುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆದ್ದಾರಿ ಬದಿಯಲ್ಲಿ ನಡೆದಿದೆ ಎನ್ನಲಾಗ್ತಿದೆ. ಆದರೆ, ಇದು ಬಂಡೀಪುರದ್ದಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೆರೆಯ ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಿ, ಕಾಡಾನೆ ಪ್ಲಾಸ್ಟಿಕ್ ತಿನ್ನುತ್ತಿರುವ ದೃಶ್ಯ ಬಂಡೀಪುರದ ವ್ಯಾಪ್ತಿಯಲ್ಲಿ ನಡೆದಿಲ್ಲ. ಇದು ಪಕ್ಕದ ತಮಿಳುನಾಡಿನ ಮಧುಮಲೈ ಅರಣ್ಯ ಪ್ರದೇಶದಲ್ಲಿ ನಡೆದಿರುವುದು ಎಂದು ತಿಳಿಸಿದ್ದಾರೆ.

ABOUT THE AUTHOR

...view details