ಕರ್ನಾಟಕ

karnataka

ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ: ಆತಂಕದಲ್ಲಿ ಜನತೆ

By

Published : Jun 20, 2022, 2:20 PM IST

ಅಹಮದಾಬಾದ್(ಗುಜರಾತ್​​): ಅಹಮದಾಬಾದ್ ನಗರದ ನಿಕೋಲ್ ಪ್ರದೇಶದ ಕಥ್ವಾರಾ ರಸ್ತೆಯಲ್ಲಿರುವ ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ 7 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ಅವಘಡದಿಂದ ಅಕ್ಕಪಕ್ಕದಲ್ಲಿ ವಾಸವಿದ್ದ ಜನರಲ್ಲಿ ಆತಂಕ ಉಂಟಾಗಿದೆ. ಆಕಸ್ಮಿಕ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.

For All Latest Updates

ABOUT THE AUTHOR

...view details