'ಫಡ್ನವೀಸ್ ಸಿಎಂ ಆಗಬಹುದಿತ್ತು, ಆದರೆ ಅವರು ವಿಶಾಲ ಹೃದಯ ತೋರಿಸಿದರು': ಏಕನಾಥ್ ಶಿಂಧೆ - ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ
ಅಚ್ಚರಿಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯ ವೇಳೆ ಮಾತನಾಡಿರುವ ಅವರು, ಬಿಜೆಪಿಯ ದೇವೇಂದ್ರ ಫಡ್ನವೀಸ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. "ಮನಸ್ಸು ಮಾಡಿದ್ದರೆ ಅವರು ಮುಖ್ಯಮಂತ್ರಿ ಆಗಬಹುದಿತ್ತು. ಆದರೆ, ಅವರ ಹೃದಯ ವಿಶಾಲವಾಗಿದೆ. ಅವರ ನಿರ್ಧಾರಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ" ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೂ ಶಿಂಧೆ ಧನ್ಯವಾದ ತಿಳಿಸಿದರು.