ಮಹಾರಾಷ್ಟ್ರದಲ್ಲಿ ಮುಂದುವರೆದ ಪ್ರವಾಹ: ಹಲವು ಪ್ರದೇಶಗಳು ಇನ್ನೂ ಜಲಾವೃತ - ಮಹಾರಾಷ್ಟ್ರದದಲ್ಲಿ ಪ್ರವಾಹ
ಚಂದ್ರಾಪುರ(ಮಹಾರಾಷ್ಟ್ರ): ನಿರಂತರ ಮಳೆಯಿಂದಾಗಿ ವಾರ್ಧಾದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಅಣೆಕಟ್ಟುಗಳು ತುಂಬಿ ಹರಿಯುತ್ತಿರುವುದರಿಂದ ಗಡ್‌ಚಿರೋಲಿ ಜಿಲ್ಲೆಯ ಸಿರೊಂಚಾ ಪಟ್ಟಣ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹಾರಾಷ್ಟ್ರ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಲ್ಲದೇ, ಪ್ರವಾಹಪೀಡಿತ ಪ್ರದೇಶಗಳಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ವರದಿ ಪ್ರಕಾರ, ಜೂನ್ 1 ರಿಂದ ಈವರೆಗೆ ರಾಜ್ಯದಲ್ಲಿ ಮಳೆ ಮತ್ತು ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಒಟ್ಟು 102 ಮಂದಿ ಸಾವನ್ನಪ್ಪಿದ್ದಾರೆ.