ಡ್ರೋನ್ ಮೂಲಕ ಚಿಕ್ಕಮಗಳೂರಲ್ಲಿ ಬೀಜ ಬಿತ್ತನೆ ಮಾಡಿದ ಅರಣ್ಯ ಇಲಾಖೆ - ಚಿಕ್ಕಮಗಳೂರಲ್ಲಿ ಬೀಜ ಬಿತ್ತನೆ ಮಾಡಿದ ಅರಣ್ಯ ಇಲಾಖೆ
ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಗಾಳಿ ಮಳೆಗೆ ಆಗಿದ್ದ ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಹೆಚ್ಚಿನ ಗಿಡಗಳನ್ನು ಬೆಳೆಸುವ ಮೂಲಕ ಮಣ್ಣು ಕುಸಿಯದಂತೆ ತಡೆಯಲು ಮನುಷ್ಯ ತೆರಳಿ ಗಿಡ ನಡೆದಂತಹ ಪ್ರದೇಶಗಳಲ್ಲಿ ಗುಜರಾತ್ ನಾ ಪ್ರೈಮ್ ಯುಎಇ ಸಂಸ್ಥೆ ಸಹಯೋಗದೊಂದಿಗೆ ಅರಣ್ಯ ಇಲಾಖೆ ಡ್ರೋನ್ ಮೂಲಕ ಬೀಜ ಬಿತ್ತನೆಗೆ ಮಾಡಿದೆ. ಚಾರ್ಮಾಡಿ ಘಾಟ್, ಬಿದ್ರುತಳ, ಮದುಗುಂಡಿ, ಮೇಗೂರು, ಸೇರಿದಂತೆ ಹಲವೆಡೆ ಗುಡ್ಡ ಕುಸಿತವಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದಲ್ಲದೇ ಪ್ರಾಣ ಹಾನಿ ಸಹ ಸಂಭವಿಸಿತ್ತು. ಅಂತಹ ಗ್ರಾಮಗಳನ್ನು ಗುರುತಿಸಿ ಅಲ್ಲಿ ಇಂದು ಡ್ರೋನ್ ಮೂಲಕ ಬೀಜ ಬಿತ್ತನೆ ಮಾಡಿದ್ದು, ಗುಡ್ಡ ಕುಸಿತ ತಡೆಗೆ ಪ್ರಯತ್ನ ನಡೆಸಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.