ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ..ನಾಲ್ವರು ಅಂತಾರಾಜ್ಯ ಕಳ್ಳರ ಬಂಧನ - ಹುಬ್ಬಳ್ಳಿಯಲ್ಲಿ ಅಂತರರಾಜ್ಯ ಕಳ್ಳರ ಬಂಧನ
ಹುಬ್ಬಳ್ಳಿ: ನಗರದಲ್ಲಿ ಜನರ ನಿದ್ದೆಗೆಡಿಸಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ ವೇಲೊರು ಗ್ರಾಮದ ರಕ್ಷಿತ್, ಪಾವಗಡ ನಿವಾಸಿ ನಿತಿನ್, ಹೊಸಪೆಟೆ ನಿವಾಸಿಗಳಾದ ಮಂಜು ಅಲಿಯಾಸ ಡಾಲಿ ಹಾಗೂ ಅರುಣ ಬಂಧಿತ ಆರೋಪಿಗಳು. ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡಿದ್ದರು. ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸದ್ಯ ಆರೋಪಿಗಳನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದು, ಇವರು ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಠಾಣೆಗೆ ಬೇಕಾದವರಾಗಿದ್ದಾರೆ.
Last Updated : Aug 17, 2022, 5:43 PM IST