'ಗಾಂಧಿ ಕುಟುಂಬದಿಂದ ಯಾರೊಬ್ಬರೂ ಕಾಂಗ್ರೆಸ್ ಅಧ್ಯಕ್ಷರಾಗಲ್ಲ': ರಾಜಸ್ಥಾನ ಸಿಎಂ ಗೆಹ್ಲೋಟ್ - ಈಟಿವಿ ಭಾರತ ಕರ್ನಾಟಕ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಮತ್ತೊಮ್ಮೆ ಸ್ಪರ್ಧೆ ಮಾಡಲಿದ್ದಾರೆಂಬ ಮಾತು ಕೇಳಿ ಬಂದಿರುವ ಬೆನ್ನಲ್ಲೇ ರಾಜಸ್ಥಾನ ಸಿಎಂ ಮಹತ್ವದ ಮಾಹಿತಿ ಹರಿಬಿಟ್ಟಿದ್ದಾರೆ. ಗಾಂಧಿ ಕುಟುಂಬದಿಂದ ಯಾರೊಬ್ಬರು ಸಹ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಲ್ಲ ಎಂದು ತಿಳಿಸಿದ್ದಾರೆ. ಕೇರಳದಲ್ಲಿ ಮಾತನಾಡಿರುವ ಅವರು, ಪಕ್ಷದ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವಂತೆ ನಾನು ಅನೇಕ ಸಲ ರಾಹುಲ್ ಗಾಂಧಿ ಬಳಿ ಮನವಿ ಮಾಡಿದ್ದೇನೆ. ಆದರೆ, ಅವರು ಒಪ್ಪಿಗೆ ನೀಡಿಲ್ಲ. ಹೀಗಾಗಿ, ಗಾಂಧಿ ಕುಟುಂಬದಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರೂ ಸಹ ಸ್ಪರ್ಧೆ ಮಾಡಲ್ಲ ಎಂದರು. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ನಿರ್ಧರಿಸಿದ್ದೇನೆ. ನಾಮಪತ್ರ ಸಲ್ಲಿಕೆ ದಿನಾಂಕ ಶೀಘ್ರದಲ್ಲೇ ನಿಗದಿಪಡಿಸಲಿದ್ದೇನೆ ಎಂದರು.