ಗಾಳಿಯಲ್ಲಿ ಗುಂಡು ಹಾರಿಸಿ ಬನ್ನಿ ಮುಡಿದ ಕಲಬುರಗಿ ವಿಹೆಚ್ಪಿ ಮುಖಂಡ: ವಿಡಿಯೋ ವೈರಲ್ - Gun firing in kalaburagi
ಕಲಬುರಗಿ: ವಿಜಯದಶಮಿ ಹಬ್ಬದ ದಿನ ವಿಶ್ವ ಹಿಂದೂ ಪರಿಷತ್ನ ಉತ್ತರ ಕರ್ನಾಟಕದ ಅಧ್ಯಕ್ಷ ಲಿಂಗರಾಜಪ್ಪ ಅಪ್ಪ ಎರಡು ಬಂದೂಕುಗಳಿಂದ ಹಲವು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗುತ್ತಿದೆ. ಗೋದುತಾಯಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬನ್ನಿ ಮುಡಿಯುವ ಮುನ್ನ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಎರಡು ಬಂದೂಕುಗಳಿಂದ 8 ಸುತ್ತು ಗುಂಡು ಹಾರಿಸಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.