ಕರ್ನಾಟಕ

karnataka

ETV Bharat / videos

ಭಾರಿ ಮಳೆಗೆ ಕೊಚ್ಚಿ ಹೋದ ಗುಂಡಮಗೆರೆ-ಮಾಕಳಿ ಸೇತುವೆ - Doddaballapur rain

By

Published : Oct 14, 2022, 11:49 AM IST

ದೊಡ್ಡಬಳ್ಳಾಪುರ: ಕಳೆದ ರಾತ್ರಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಗುಂಡಮಗೆರೆ - ಮಾಕಳಿ ಗ್ರಾಮಕ್ಕೆ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಪರಿಣಾಮ ಎತ್ತಿನಹೊಳೆ ಯೋಜನೆಯ ಪೈಪ್​ಲೈನ್ ಮೂಲಕ ಗ್ರಾಮಸ್ಥರು ರಸ್ತೆ ದಾಟಬೇಕಾದ ಅನಿವಾರ್ಯತೆ ಉಂಟಾಗಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಅಕ್ಟೋಬರ್ 17 ರಂದು ಮಾಕಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಅಯೋಜನೆ ಮಾಡಲಾಗಿದ್ದು, ತಹಶೀಲ್ದಾರ್ ಮೋಹನಕುಮಾರಿ ಗ್ರಾಮ ವಾಸ್ತವ್ಯ ಮಾಡಲಿದ್ದರು. ಆದರೀಗ ಸಂಪರ್ಕ ಸೇತುವೆ ಕೊಚ್ಚಿಹೋಗಿರುವುದರಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯುವುದು ಅನುಮಾನ.

ABOUT THE AUTHOR

...view details