ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ - R_Kn_Ckm_04_21_Rain_Rajkumar_Ckm_av_7202347
ಚಿಕ್ಕಮಗಳೂರು: ಕಳೆದ ಒಂದು ವಾರದಲ್ಲಿ ಮೂರನೇ ಬಾರಿಗೆ ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ಮಧ್ಯ ರಾತ್ರಿಯೂ ಗುಡುಗು ಮಿಶ್ರಿತ ಮಳೆಯಾಗಿದ್ದು, ಇಂದು ಕೂಡ ಚಿಕ್ಕಮಗಳೂರು ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ನಿರಂತರವಾಗಿ ಸುರಿಯುತ್ತಿರುವ ಹಿನ್ನಲೆ ನಗರ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ವಿಜಯಪುರ, ಗೌರಿ ಕಾಲುವೆ, ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.