ಹಾವೇರಿಯಲ್ಲಿ ಧಾರಾಕಾರ ಮಳೆ..ವಾಹನ ಸವಾರರ ಪರದಾಟ - ಹಾವೇರಿ ಜಿಲ್ಲೆಯಾದ್ಯಂತ ಭಾರಿ ಮಳೆ
ಹಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಯಲಗಚ್ಚ, ಅಗಡಿ ಸೇರಿದಂತೆ ಹಲವೆಡೆ ಚರಂಡಿ ತುಂಬಿ ನೀರು ಹರಿಯಲಾರಂಭಿಸಿದೆ. ರಸ್ತೆಯಲ್ಲಿ ಹರಿಯುತ್ತಿರುವ ನೀರಲ್ಲಿ ಓಡಾಡಲು ವಾಹನ ಸವಾರರು ಪರದಾಡುತ್ತಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.