ಮೈಸೂರು: ಧಾರಾಕಾರ ಮಳೆಗೆ ತಂಬಾಕು, ಶುಂಠಿ ಬೆಳೆ ಜಲಾವೃತ - ಈಟಿವಿ ಭಾರತ್ ಕನ್ನಡ
ಮೈಸೂರು: ಕಳೆದು ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹುಣಸೂರು ತಾಲೂಕಿನಲ್ಲಿ ಜನಜೀವನಕ್ಕೆ ತೊಂದರೆಯಾಗಿದೆ. ಕೆಬ್ಬೆಕೊಪ್ಪಲು ಗ್ರಾಮದಲ್ಲಿ ಸತೀಶ್ ಎಂಬುವವರಿಗೆ ಸೇರಿದ ತಂಬಾಕು ಬ್ಯಾರನ್ ಮನೆ ಧರೆಗುರುಳಿದಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗ್ರಾಮದ ತಂಬಾಕು, ಶುಂಠಿ ಸೇರಿದಂತೆ ಹಲವು ಬೆಳೆಗಳು ಜಲಾವೃತವಾಗಿವೆ. ಬನ್ನಿಕುಪ್ಪೆ ಗ್ರಾಮದ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ್ದು ಮನೆಗಳಿಗೆ ಜಲದಿಗ್ಬಂಧನ ಹಾಕಿದೆ.