ಭಾರತ-ಪಾಕ್ ನಡುವೆ ಹೈವೋಲ್ಟೇಜ್ ಪಂದ್ಯ:ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ
ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಪಟ್ಟಂತೆ ತುಮಕೂರಿನಲ್ಲಿ ಕ್ರಿಕೆಟ್ ಅಭಿಮಾನಿಗಳು ಭಾರತದ ಗೆಲುವಿನ ಕುರಿತು ಭಾರಿ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಮುಖ್ಯವಾಗಿ ಭಾರತ ತಂಡವು ಪಾಕಿಸ್ತಾನ ತಂಡಕ್ಕಿಂತ ಪ್ರಬಲ ಪೈಪೋಟಿ ನೀಡುವಂತಹ ಫಾರಂನಲ್ಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ನಮ್ಮ ಪ್ರತಿನಿಧಿ ಕ್ರಿಕೆಟ್ ಅಭಿಮಾನಿಗಳೊಂದಿಗೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.