ಕೇಂದ್ರದಲ್ಲಿ ಬಿಜೆಪಿ ಸರ್ಕಾರಕ್ಕೆ 8 ವರ್ಷ : ಶಿಮ್ಲಾದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ.. ವಿಡಿಯೋ - ಶಿಮ್ಲಾದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ
ಶಿಮ್ಲಾ(ಹಿಮಾಚಲಪ್ರದೇಶ) : ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಹಿಮಾಚಲಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ರಾಜಧಾನಿ ಶಿಮ್ಲಾಕ್ಕೆ ಆಗಮಿಸಿದ ಪ್ರಧಾನಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಅವರ ಕಾರಿನ ಮೇಲೆ ಜನರು ಪುಷ್ಪಾರ್ಪಣೆ ಮಾಡಿದರು. ಇದೇ ವೇಳೆ ಮೋದಿ ಅವರು ಕೂಡ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳಿ ನೆರೆದಿದ್ದ ಜನರತ್ತ ಕೈಬೀಸಿ ಅಭಿನಂದಿಸಿದರು.