ಕಾರು-ಬೈಕ್ ನಡುವೆ ಭೀಕರ ಅಪಘಾತ.. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ - ಕಾರಿಗೆ ಡಿಕ್ಕಿ ಹೊಡೆದ ಬೈಕ್
ಸೂರತ್(ಗುಜರಾತ್): ಕಾರು-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದರ ದೃಶ್ಯಾವಳಿ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಸೂರತ್ನ ಜಿಲಾನಿ ಸೇತುವೆ ಬಳಿ ಈ ಘಟನೆ ನಡೆದಿದೆ. ಬೈಕ್ ಮೇಲೆ ತೆರಳುತ್ತಿದ್ದ ಚಿಂತನ್ ಹಾಗೂ ವಿಶಾಲ್ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆ ಬೆನ್ನಲ್ಲೇ ಕಾರಿನ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಚಿಂತನ್ ಸ್ಥಿತಿ ಚಿಂತಾಜನಕವಾಗಿದ್ದು, ವಿಶಾಲ್ ಸಣ್ಣಪುಟ್ಟ ಗಾಯದಿಂದ ಬಚಾವ್ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.