ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಸಾಮಾನ್ಯರಿಗೊಂದು ಕಾನೂನಿಲ್ಲ: ಸಚಿವ ಆರಗ ಜ್ಞಾನೇಂದ್ರ - ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ
ಚಿಕ್ಕಮಗಳೂರು: ಈ ದೇಶದಲ್ಲಿ ಗಾಂಧಿ ಕುಟುಂಬಕ್ಕೊಂದು, ಸಾಮಾನ್ಯ ಜನರಿಗೊಂದು ಕಾನೂನಿಲ್ಲ. ಎಲ್ಲರಿಗೂ ಇರೋದು ಒಂದೇ ಕಾನೂನು. ಈ ನೆಲದ ಕಾನೂನನ್ನ ಎಲ್ಲರೂ ಗೌರವಿಸಬೇಕು ಎಂದು ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿದ್ದಾಗ ಇಡಿ ಕರೆದು ವಿಚಾರಣೆ ಮಾಡಿದಾಗ ಪ್ರತಿಭಟನೆ ಮಾಡ್ತಾರೆ. ಅವರಿಗೆ ಈ ದೇಶದ ಕಾನೂನಿನ ಬಗ್ಗೆ ಗೌರವವಿಲ್ಲ. ಕಾಂಗ್ರೆಸಿಗರು ದೇಶದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಜನ ಅವರನ್ನು ತುಚ್ಛವಾಗಿ ನೋಡ್ತಾರೆ ಎಂದರು.
Last Updated : Jun 22, 2022, 5:00 PM IST