ಪ್ರವಾದಿ ಕುರಿತ ವಿವಾದಿತ ಹೇಳಿಕೆಗೆ ಆಕ್ರೋಶ; ದೇಶಾದ್ಯಂತ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ - Outrage over Prophet remarks
ಪ್ರವಾದಿ ಮಹಮ್ಮದ್ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿ ಈಗಾಗಲೇ ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರದ ಪ್ರಾರ್ಥನೆ ಮುಕ್ತಾಯಗೊಳ್ಳುತ್ತಿದ್ದಂತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಸ್ಲಿಮರು ಏಕಾಏಕಿ ಪ್ರತಿಭಟನೆ ನಡೆಸಲು ಬೀದಿಗಿಳಿದರು. ಈ ಸಂದರ್ಭದಲ್ಲಿ ಅನೇಕ ಕಡೆಗಳಲ್ಲಿ ಹಿಂಸಾಚಾರ ಉಂಟಾಗಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಕಾರು, ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾರೆ. ರಸ್ತೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಪ್ರಮುಖವಾಗಿ ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ, ತೆಲಂಗಾಣ, ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್ನಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆದಿವೆ.
Last Updated : Jun 10, 2022, 5:44 PM IST