ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ 775 ಮನೆಗಳಿಗೆ ಹಾನಿ.. ಸರ್ವೇ ಕಾರ್ಯಕ್ಕೆ ಡಿಸಿ ಸೂಚನೆ - ಬೆಳಗಾವಿ ಜಿಲ್ಲೆಯಲ್ಲಿ ಮಳೆಯಿಂದ 775 ಮನೆಗಳು ಹಾನಿ
ಬೆಳಗಾವಿ: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಈವರೆಗೆ 775ಮನೆಗಳು ಹಾನಿಯಾಗಿದ್ದು, ಸರ್ವೇ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ ಡಾ. ನಿತೇಶ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ ಅಪಾರ ಪ್ರಮಾಣದಲ್ಲಿ ಮನೆಗಳಿಗೆ ಹಾನಿಯಾಗಿದೆ. ಅದರಲ್ಲಿ ಪ್ರಮುಖವಾಗಿ 108ಮನೆಗಳಿಗೆ ತೀವ್ರ ಹಾನಿಯಾಗಿದ್ದರೆ, 667ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಸವದತ್ತಿ ತಾಲೂಕಿನಲ್ಲಿ- 191, ಬೈಲಹೊಂಗಲ-112, ಕಿತ್ತೂರು- 99, ರಾಮದುರ್ಗ- 92, ಚಿಕ್ಕೋಡಿ- 89, ಬೆಳಗಾವಿ ತಾಲೂಕಿನಲ್ಲಿ 42ಮನೆಗಳು ಮಳೆಯಿಂದ ಹಾನಿಯಾಗಿವೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.