ವಿಡಿಯೋ: ಮದುವೆ ಕಾರ್ಯಕ್ರಮದಲ್ಲಿ ಸಖತ್ ಡ್ಯಾನ್ಸ್ ಮಾಡಿದ ಜೆಡಿಯು ಶಾಸಕ! - ಮದುವೆ ಕಾರ್ಯಕ್ರಮದಲ್ಲಿ ಶಾಸಕನ ಡ್ಯಾನ್ಸ್
ಭಾಗಲ್ಪುರ್(ಬಿಹಾರ): ಭಾಗಲ್ಪುರದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಜೆಡಿಯು ಶಾಸಕ ಗೋಪಾಲ್ ಮಂಡಲ್ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಬಾಲಿವುಡ್ನ 'ಹೋಶ್ ನಾ ಖಬರ್ ಹೈ, ಯೇ ಕೈಸಾ ಆಸರ್ ಹೈ..'ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಜೆಡಿಯು ಶಾಸಕ ಗೋಪಾಲ್ ಮಂಡಲ್ ವಿವಾದಿತ ಹೇಳಿಕೆಗಳಿಂದಲೇ ಹೆಚ್ಚು ಸುದ್ದಿಯಲ್ಲಿರುವ ವ್ಯಕ್ತಿಯಾಗಿದ್ದು, ಇದೀಗ ಡ್ಯಾನ್ಸ್ ಮಾಡುವ ಮೂಲಕ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದಾರೆ.