ನೀರಿನ ತೊಟ್ಟಿಯಲ್ಲಿ ಅಡಗಿ ಕೂತಿದ್ದ ಕಾಳಿಂಗ ಸರ್ಪ! - undefined
ಕಾರವಾರ: ತಾಲೂಕಿನ ಕದ್ರಾದ ಕೆಪಿಸಿ ಕಾಲೋನಿಯ ಮನೆಯೊಂದರ ನೀರಿನ ತೊಟ್ಟಿಯಲ್ಲಿ ಕಾಳಿಂಗ ಸರ್ಪ ಅಡಗಿ ಕುಳಿತಿದ್ದ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸುಮಾರು 12 ಅಡಿ ಉದ್ದದ ಭಾರಿ ಗಾತ್ರದ ಕಾಳಿಂಗ ಸರ್ಪವನ್ನು ನೋಡಿದ ಮನೆಯವರು ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.